ಅರಣ್ಯ ಇಲಾಖೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

0
28

ಬೆಂಗಳೂರು: ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವಾದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ಇನ್ನು ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

Previous articleಭೀಮ ನದಿ: ಮನೆಗಳಿಗೆ ನುಗ್ಗಿದ ನೀರು
Next articleಮಾಜಿ ಸಚಿವ ವೀರಕುಮಾರ ಪಾಟೀಲ ಪುತ್ರ ಪ್ರೀತಮ್ ಬಂಧನ