ಅರ್ಜುನ್ ಮೃತದೇಹದ ಜೊತೆ ಭಾರತ್ ಬೆಂಜ್ ಲಾರಿಯೂ ಪತ್ತೆ

0
21

ಕಾರವಾರ: ಅಂಕೋಲಾ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದ ಕೇರಳ ಮೂಲದ ಭಾರತ್ ಬೆಂಜ್ ಲಾರಿಯ ಜೊತೆಗೆ ಚಾಲಕ ಅರ್ಜುನ್ ಮೃತದೇಹ ಕೂಡ ಪತ್ತೆಯಾಗಿದೆ.
ಗಂಗಾವಳಿ ನದಿಯಲ್ಲಿ ಇಂದು ನಡೆದ ಆರನೇ ದಿನದ ಕಾರ್ಯಾಚರಣೆ ವೇಳೆ ಹಲವು ಅವಶೇಷಗಳು ಪತ್ತೆಯಾಗಿದ್ದವು. ಮುಂಜಾನೆ ಡ್ರೆಜ್ಜಿಂಗ್ ಮಶಿನ್ ಗೆ ಬೃಹತ್ ವಸ್ತು ಸಿಗುತ್ತಿರುವುದು ಪತ್ತೆಯಾಗಿತ್ತು. ಅಲ್ಲದೆ ಕೆರಳದ ಅರ್ಜುನ್ ಚಲಾಯಿಸುತ್ತಿದ್ದ ಲಾರಿಯ ಬಿಡಿಭಾಗ ಕೂಡ ದೊರೆತಿತ್ತು. ಇದರಿಂದ ಗಂಗಾವಳಿ ನದಿಯಲ್ಲಿ ಡ್ರೆಜ್ಜಿಂಗ್ ಮಶಿನ್ ನಿರಂತರವಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು ಇದೀಗ ಭಾರತ್ ಬೆಂಜ್ ಲಾರಿ ಕೂಡ ಪತ್ತೆಯಾಗಿದೆ.
ಸದ್ಯ ಲಾರಿಯನ್ನು ಬಾರ್ಜ್ ನಲ್ಲಿರುವ ಕ್ರೇನ್ ಮೂಲಕ ಮೇಲಕ್ಕೆ ಎತ್ತಿದ್ದು ಲಾರಿ ಮುಂಭಾಗ ಹಾಗೂ ಚಾಲಕನ‌ ಮೃತದೇಹ ಗೋಚರವಾಗಿದೆ. ಜುಲೈ 16 ರಂದು ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದ್ದ ಭೀಕರ ಗುಡ್ಡ ಕುಸಿತ ದುರಂತದಲ್ಲಿ 11 ಮಂದಿ ಪ್ರಾಣಕಳೆದುಕೊಂಡಿದ್ದರು. ಅವುಗಳ ಪೈಕಿ ಎಂಟು ಮಂದಿಯ ಮೃತದೇಹ ಪತ್ತೆಯಾಗಿತ್ತು. ಸ್ಥಳೀಯರಾದ ಜಗನ್ನಾಥ ನಾಯ್ಕ,ಲೋಕೇಶ ನಾಯ್ಕ ಹಾಗೂ ಕೇರಳ ಮೂಲದ ಅರ್ಜುನ್ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ಇನ್ನಿಬ್ಬರ ಮೃತದೇಹ ಪತ್ತೆಯಾಗಬೇಕಿದೆ.

Previous articleತನಿಖೆಗೆ ಹೆದರುವ ಪ್ರಶ್ನೆಯೇ ಇಲ್ಲ…
Next articleಬಿಜೆಪಿಯವರು ಇನ್ನೂ ನಾಲ್ಕು ವರ್ಷ ಪ್ರತಿಭಟನೆ ಮಾಡ್ತಾನೆ ಇರಲಿ