ಅರ್ಜುನ ಇನ್ನು ನೆನಪಷ್ಟೇ

0
13

ಹಾಸನ: ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿ ಅರ್ಜುನ ಸಾವನ್ನಪ್ಪಿರುವ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು. ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ. ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ. ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ.
ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ. ಆ ತಾಯಿ ಚಾಮುಂಡೇಶ್ವರಿ ಸದ್ಗತಿ ಕರುಣಿಸಲಿ ಎಂದು ಬರೆದುಕೊಂಡಿದ್ದಾರೆ.

Previous articleಅಸ್ಥಿಪಂಜರದಂತಾಗಿರುವ ಓವರ್ ಹೆಡ್ ಟ್ಯಾಂಕ್
Next articleಅರ್ಜುನನ ನಡಿಗೆ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ