ಅರ್ಧಕ್ಕೆ ಭಾಷಣ ನಿಲ್ಲಿಸಿ ಹೊರನಡೆದ ಯತ್ನಾಳ

0
31

ಬಾಗಲಕೋಟೆ: ಜಿಲ್ಲೆಯ ತೇರದಾಳದಲ್ಲಿ ಅಲ್ಲಮಪ್ರಭು ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣದಲ್ಲಿ ಅಲ್ಲಮಪ್ರಭು ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ವಕ್ಫ್ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ವೇಳೆ ಅಲ್ಲಿ ಸೇರಿದ್ದ ಜನಸ್ತೋಮ ದೇವಸ್ಥಾನ ನಿರ್ಮಾಣಕ್ಕೆ ಎಲ್ಲಾ ಸಮುದಾಯದವರು ದೇಣಿಗೆ ಕೊಟ್ಟಿದ್ದಾರೆ. ಮುಸ್ಲಿಮರು ಸಹ 6 ಲಕ್ಷ ರೂ. ದೇಣಿಗೆ ಕೊಟ್ಟಿದ್ದಾರೆ ಹಾಗಾಗಿ ರಾಜಕೀಯದ ಮಾತು ಬೇಡ ಎಂದು ವಿನಂತಿಸಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ ಅವರು ಇದು ರಾಜಕೀಯದ ಮಾತಾ ಎಂದು ಸೇರಿದ ಜನರನ್ನೇ ಪ್ರಶ್ನಿಸಿ ಭಾಷಣವನ್ನು ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದಿದ್ದಾರೆ.

Previous articleಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು
Next articleಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು