ಕೊಪ್ಪಳ: ತಾಲ್ಲೂಕಿನ ಅಳವಂಡಿ ಗ್ರಾಮದ ಹಲವಾಗಲಿ ರಸ್ತೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಜನಸ್ಪಂದನಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಲಿನ್ ಅತುಲ್ ಚಾಲನೆ ನೀಡಿದರು.
ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ಧಿ, ಅರಣ್ಯಾಧಿಕಾರಿ ಕಾವ್ಯ ಚತುರ್ವೇದಿ, ಉಪವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ ತೋಟಗಾರಿಕಾ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ, ತಹಶೀಲ್ದಾರ್ ವಿಠ್ಠಲ್ ಚೌಗಲಾ ಇದ್ದರು.