ಅಳಿಯನಿಂದ ಅತ್ತೆಯ ಕೊಲೆ

0
30

ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಅಳಿಯನಿಂದ ಅತ್ತೆಯ ಕೊಲೆ ನಡೆದಿದೆ.
65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್‌ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿ ಶಶಿಧರ್ ಪರಾರಿಯಾಗಿದ್ದಾನೆ. ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಪರಾರಿಯಾಗಿರುವ ಶಶಿಧರ್‌ನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕೊಲೆಯ ಹಿಂದಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous articleಈಜಲು ಹೋಗಿ ನೀರು ಪಾಲಾದ ಯುವಕ
Next articleಸಿದ್ದರಾಮಯ್ಯ ಮುಂದಿನ ಅವಧಿಗೂ ಸಿಎಂ