Home ತಾಜಾ ಸುದ್ದಿ ಅವರು, ಹೇಳಿಕೆ ಕೊಡುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ?

ಅವರು, ಹೇಳಿಕೆ ಕೊಡುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ?

0

ಬೆಂಗಳೂರು: ಕಣ್ಣು ಕಿವಿಯಲ್ಲಿ ಸುಳ್ಳು ಹೇಳಲು ಆಗುವುದಿಲ್ಲ. ಬಾಯಲ್ಲಿ ಮಾತ್ರ ಸುಳ್ಳು ಹೇಳಲು ಸಾಧ್ಯ ಹೀಗಾಗಿ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯನವರ ಬಜೆಟ್ ಮಂಡನೆಗೆ ಟೀಕೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಜೆಟ್ ಹಲಾಲ್ ಬಜೆಟ್ ಎಂದು ಟೀಕೆ ಮಾಡಿರುವ ಬಿಜೆಪಿ ನಾಯಕರ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ಪಾಪ ಅವರು ಏನು ಮಾಡುತ್ತಾರೆ. ಈ ರೀತಿ ಹೇಳಿಕೆಗಳನ್ನ ಕೊಡುವುದು ಬಿಟ್ಟರೆ ಇನ್ನೇನು ಮಾಡಲು ಸಾಧ್ಯ? ನಮ್ಮ ಬಜೆಟ್ ಮಂಡನೆಯನ್ನು ಅವರು ಕಣ್ಣಾರೆ ಓದಿದ್ದು, ಕಿವಿಯಾರೆ ಕೇಳಿದ್ದು, ಈ ರೀತಿಯ ಸುಳ್ಳು ಪ್ರಚಾರ ಮಾಡ್ತಿದ್ದಾರೆ.. ಕಣ್ಣು ಕಿವಿಯಲ್ಲಿ ಸುಳ್ಳು ಹೇಳಲು ಆಗುವುದಿಲ್ಲ. ಬಾಯಲ್ಲಿ ಮಾತ್ರ ಸುಳ್ಳು ಹೇಳಲು ಸಾಧ್ಯ. ಹೀಗಾಗಿ ಈ ರೀತಿ ಹೇಳುತ್ತಿದ್ದಾರೆ, ಇನ್ನು ಇಡೀ ವಿಶ್ವ ಬೆಂಗಳೂರಿನತ್ತ ತಿರುಗಿ ನೋಡುತ್ತಿದ್ದು, ಈ ನಗರಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ, ಜನರ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಸಾಲ ಮಾಡಿಯಾದರೂ ಜನರಿಗೆ ರೀಲಿಪ್‌ ಮಾಡುತ್ತೇವೆ ಎಂದರು.

ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು: ಬೆಂಗಳೂರು ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು ಇಟ್ಟಿರುವ ಬಗ್ಗೆ ವಿವಾದ ಕುರಿತಂತೆ ಮಾತನಾಡಿ, ಅವರು ದೀನದಯಾಳ್ ಅವರು ಹೆಸರು ಇಡುವಾಗ ನಾವು ಮನಮೋಹನ್ ಸಿಂಗ್ ಹೆಸರು ಇಡಬಾರದೆ? ಎಂದು ಪ್ರಶ್ನಿಸಿದ್ದಾರೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ವೇತುವೆ ಮಾಡಿದವರು ಯಾರು, ಎಲೆಕ್ಟ್ರಾನಿಕ್ ಸಿಟಿ ಮೇಲೆತುವೆ ಮಾಡಿದವರು ಯಾರು.?, ನೆಲಮಂಗಲ ಮೇತುವೆ ಮಾಡಿದವರು ಯಾರು.?, ಜೆ.ಎನ್ ನರ್ಮ್ ಯೋಜನೆ ಮಾಡಿದವರು ಯಾರು.?, ನರೇಗಾ ಯೋಜನೆ ಜಾರಿ ಮಾಡಿದವರು ಯಾರು.?, ಆಹಾರ ಭದ್ರತಾ ಕಾಯ್ದೆ ಮಾಡಿದವರು ಯಾರು.?, ಶಿಕ್ಷಣ ಹಕ್ಕು ಮಾಡಿದವರು ಯಾರು.?, ಮಾಹಿತಿ ಹಕ್ಕು, ಆಶಾ ಕಾರ್ಯಕರ್ತ ಯೋಜನೆ ಜಾರಿಗೆ ತಂದವರು ಯಾರು..? ಎಂದು ಪ್ರಶ್ನಿಸುತ್ತಿಲ್ಲೇ ಇದು ಸರಿಯಾದ ಕ್ರಮ ಎಂದು ಸಮರ್ಥಿಸಿಕೊಂಡರು, ಇನ್ನು ಬಿಜೆಪಿಯವರು ಇಂತಹ ಯಾವುದಾದರೂ ಒಂದು ಯೋಜನೆ ಮಾಡಿದ್ದಾರಾ?, ದೇಶ ಹಾಗೂ ಕರ್ನಾಟಕ ರಾಜ್ಯದ ಕೊಡುಗೆಗೆ ಮನಮೋಹನ್ ಸಿಂಗ್ ಅವರು ಕೊಟ್ಟಿರುವ ಕೊಡುಗೆಗೆ ಅವರಿಗೆ ಇನ್ನಷ್ಟು ಮಾನ್ಯತೆ ನೀಡಬೇಕು” ಎಂದರು.

Exit mobile version