ಹುಬ್ಬಳ್ಳಿ: ಕರ್ನಾಟಕದ ಕಣ್ಮಣಿ, ಹ್ಯಾಟ್ರಿಕ್ ಹೀರೊ ಡಾ. ಶಿವರಾಜ್ ಕುಮಾರ್ ಅವರು ನ. ೨೬ರಂದು ಹುಬ್ಬಳ್ಳಿ-ಧಾರವಾಡ ಅವಳಿನಗರಗಳ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಕೆಲ ಕಾಲೇಜುಗಳಿಗೆ ಭೇಟಿ ನೀಡಲಿದ್ದು, ಮಾದಕ ವಸ್ತುಗಳ ನಿರ್ಮೂಲನಾ ಜಾಗೃತಿ ಅಭಿಯಾನ ನಡೆಸಲಿದ್ದಾರೆ.
ಬೆಳಿಗ್ಗೆ ೯.೪೫ಕ್ಕೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿಗೆ ಭೇಟಿ ನೀಡುವರು. ಬೆಳಿಗ್ಗೆ ೧೦ಗಂಟೆಗೆ ಧಾರವಾಡದಲ್ಲಿರುವ ಜೆಎಸ್‌ಎಸ್ ಕಾಲೇಜಿಗೆ, ಬೆಳಿಗ್ಗೆ ೧೦.೧೫ಕ್ಕೆ ಕೆಸಿಡಿ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದು ಮಹಾನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.