ಅವಳಿನಗರ ಪಾಲಿಕೆಯಲ್ಲಿ ಸತತ 13ನೇ ಬಾರಿಗೆ ಬಿಜೆಪಿ ಅಭ್ಯರ್ಥಿ

ಬೆಂಗಳೂರು/ಧಾರವಾಡ: ಹು-ಧಾ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ರಾಮಣ್ಣ ಬಡಿಗೇರ ಹಾಗೂ ಉಪ ಮೇಯರ್ ಆಗಿ ದುರ್ಗಮ್ಮ ಬೀಜವಾಡ ಆಯ್ಕೆಗೆ ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಸಂಸದರೂ ಆಗಿರುವ ಬಸವರಾಜ ಬೊಮ್ಮಾಯಿ ಕಾರ್ಯಕರ್ತ ಬಂಧುಗಳಿಗೆ ಹಾಗೂ ಪ್ರಮುಖರಿಗೆ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ಬಿಜೆಪಿಯ ಹಿರಿಯ ಕಾರ್ಯಕರ್ತರು ಹಾಗೂ ಆತ್ಮೀಯರಾದ ರಾಮಣ್ಣ ಬಡಿಗೇರ ಹಾಗೂ ಉಪಮಹಾಪೌರರಾಗಿ ಆಯ್ಕೆಯಾಗಿರುವ ಶ್ರೀಮತಿ ದುರ್ಗಮ್ಮಾ ಬಿಜವಾಡರವರಿಗೆ ಹಾರ್ದಿಕ ಅಭಿನಂದನೆಗಳು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸತತ 13ನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಮಹಾಪೌರರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಈ ಸಾಧನೆಯ ಹಿನ್ನೆಲೆಯಲ್ಲಿ ಮಹಾನಗರದ ಮತದಾರರು ಹಾಗೂ ಅವಿರತವಾಗಿ ಶ್ರಮಿಸಿರುವ ನಮ್ಮ ಪಕ್ಷದ ಸಮಸ್ತ ಕಾರ್ಯಕರ್ತ ಬಂಧುಗಳಿಗೆ ಹಾಗೂ ಪ್ರಮುಖರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದಿದ್ದಾರೆ.