Home ಅಪರಾಧ ಅವಹೇಳನಕಾರಿ ಪೋಸ್ಟ್ ಡಿಕೆಶಿ ವಿರುದ್ಧ ಎಫ್‌ಐಆರ್

ಅವಹೇಳನಕಾರಿ ಪೋಸ್ಟ್ ಡಿಕೆಶಿ ವಿರುದ್ಧ ಎಫ್‌ಐಆರ್

0

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ ಎಂದು ಬಿಜೆಪಿ ಕಾನೂನು ಪ್ರಕೋಷ್ಠದ ಮಾಜಿ ಸಂಚಾಲಕ ಯೋಗೇಂದ್ರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ್ದರು. ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್, ಕಾಂಗ್ರೆಸ್ ಪಕ್ಷ ಹಂಚಿಕೊಂಡಿತ್ತು. ಆದ್ದರಿಂದ ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಇದೀಗ ಡಿಕೆ ಶಿವಕುಮಾರ್ ಮತ್ತು ಬಿ.ಆರ್.ನಾಯ್ಡು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Exit mobile version