ಹೆದರುವ ವ್ಯಕ್ತಿ ನಾನಲ್ಲ ಎಂದ ಯತ್ನಾಳ್
‘ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ’ ಅವರನ್ನು ಕೊಲ್ಲಿಸಿದ್ದು ನೆಹರೂ ಎನ್ನುವ ಮೂಲಕ ಯತ್ನಾಳ್ ಅಕ್ಷಮ್ಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಮಾತನಾಡಿದ್ದಾರೆಂದು ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ದಾಖಲಿಸಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ಕಾಂಗ್ರೆಸ್ ಅಧಿಕೃತ ಖಾತೆ ಮೂಲಕ ಪೋಸ್ಟ್ ಮಾಡಿ ಮುಂಚೂಣಿ ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಕಾಂಗ್ರೆಸ್ ನಾಯಕ, ದೇಶದ ಮೊದಲ ಪ್ರಧಾನಿಗಳಾದ ಜವಾಹರ ಲಾಲ್ ನೆಹರು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ‘ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ’ ಅವರನ್ನು ಕೊಲ್ಲಿಸಿದ್ದು ನೆಹರೂ ಎನ್ನುವ ಮೂಲಕ ಯತ್ನಾಳ್ ಅಕ್ಷಮ್ಯ ಹೇಳಿಕೆ ನೀಡಿದ್ದಾರೆ. ಯತ್ನಾಳ್ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿತ್ತು.
ಯತ್ನಾಳ ಪ್ರತಿಕ್ರಿಯೆ : ಇನ್ನು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು ನೀವು ನನ್ನ ವಿರುದ್ಧ ನೀಡಿರುವ ಎಲ್ಲಾ ದೂರುಗಳು ಕಸದ ಬುಟ್ಟಿ ಸೇರಿದೆ, ಈ ದೂರು, ಅರ್ಜಿಗಳಿಗೆಲ್ಲ ಹೆದರುವ ವ್ಯಕ್ತಿ ನಾನಲ್ಲ ಅಂತ ಈಗಾಗಲೇ ಹೇಳಿದ್ದೇನೆ. ನಿಮಗೆ ನನ್ನ ಸಲಹೆ ಇದೆಲ್ಲ ಅರ್ಜಿಗಳು ಬಿಟ್ಟು “ನೆಹರು ಪರದೆ ಸರಿಯಿತು” , ಇಂತಹ ಪುಸ್ತಕಗಳನ್ನು ಓದಿ ಎಂದಿದ್ದಾರೆ.