ಬೆಂಗಳೂರು: ಎರಡು ದಿನಗಳ ಭೇಟಿಗಾಗಿ ಬೆಂಗಳೂರಿಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಆಗಮಿಸಿದ್ದಾರೆ.
ನಿನ್ನೆ ರಾತ್ರಿ ನಗರಕ್ಕೆ ಆಗಮಿಸಿದ ಅವರನ್ನು ರಾಜ್ಯ ಬಿಜೆಪಿ ನಾಯಕರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಪಕ್ಷದ ಪ್ರಮುಖರು ಸ್ವಾಗತ ಕೋರಿದರು. ಸಚಿವ ಅಶ್ವಿನಿ ವೈಷ್ಣವ್ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ವಲಯ ರೈಲ್ವೆ ವ್ಯವಸ್ಥಾಪಕ ಕಚೇರಿಯಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ ನಡೆಯಲಿರುವ ಇಂಟಲೆಕ್ಚುಯಲ್ ಮೀಟ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ನಡುವೆ ಅವರು, ಬೆಂಗಳೂರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿರುವ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇಂದು ಬೆಳಗ್ಗೆ ಅವರನ್ನು ಭೇಟಿಯಾಗಿದ್ದಾರೆ