ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಡುಬುಡಿಕೆ ರೀತಿ ಆಡಳಿತ ಮಾಡುತ್ತಿದ್ದಾರೆ. ಅಹಿಂದ ಹೆಸರಲ್ಲಿ ಅವರು ಮತ್ತೆ ಡೋಲ್ ಬಾರಿಸುತ್ತಿದ್ದಾರೆ ಎಂದು ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಸ್ವಾಭಿಮಾನ ಸಮಾವೇಶ ಏಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಮಾವೇಶ ಮಾಡಬಹುದಲ್ಲ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯನವರು ಒಂದೂವರೆ ವರ್ಷ ಆಡಳಿತದಲ್ಲಿ ವಿಫಲರಾಗಿದ್ದಾರೆ. ಹಗರಣಗಳ ಸರಮಾಲೆ ಅವರನ್ನ ಸುತ್ತಿಕೊಂಡಿವೆ. ಹೀಗಾಗಿ ಗಿಮಿಕ್ ಮಾಡುತ್ತಿದ್ದಾರೆ. ಅದನ್ನು ಮರೆಮಾಚಲು ಸಿದ್ದರಾಮಯ್ಯನವರು ಒಂದೂವರೆ ವರ್ಷ ಆಡಳಿತದಲ್ಲಿ ವಿಫಲರಾಗಿದ್ದಾರೆ. ಹಗರಣಗಳ ಸರಮಾಲೆ ಅವರನ್ನ ಸುತ್ತಿಕೊಂಡಿವೆ.ಹೀಗಾಗಿ ಗಿಮಿಕ್ ಮಾಡುತ್ತಿದ್ದಾರೆ ಎಂದರು.
ಅಧಿವೇಶನದ ಹಿನ್ನೆಲೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಏಕೆ ದೆಹಲಿಗೆ ಹೋಗುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.
ಬಿಜೆಪಿಯಲ್ಲಿ ಬಣಗಳೆಂಬುದಿಲ್ಲ. ಎಲ್ಲಾ ಪಕ್ಷದಲ್ಲೂ ಸಣ್ಣ ಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ಎಲ್ಲವನ್ನು ಸರಿಪಡಿಸುವಂvಹÀ ಶಕ್ತಿ ಇರುವಂತ ಪವರ ಫುಲ್ ಹೈಕಮಾಂಡ್ ನಮ್ಮದು ಎಂದರು.