ಆತ್ಮವಿಶ್ವಾಸವಿದ್ದರೆ ಗೆಲುವು ನಿಶ್ಚಿತ

ಬೆಂಗಳೂರು: 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾದ ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆಗಳು ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಶ್ರದ್ಧೆ, ಶ್ರಮದ ಜೊತೆ ಆತ್ಮವಿಶ್ವಾಸವಿದ್ದರೆ ಗೆಲುವು ನಿಶ್ಚಿತ ಎನ್ನುವುದಕ್ಕೆ ಎರಡನೇ ಪ್ರಯತ್ನದಲ್ಲಿ ಉತ್ತೀರ್ಣರಾದ ಮಕ್ಕಳೆ ನಿದರ್ಶನ. ಈ ಪರೀಕ್ಷೆಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಉತ್ತೀರ್ಣರಾಗಿರುವುದು ಗಮನಾರ್ಹ ಸಂಗತಿ.

ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, 6,635 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ನಾವು ರೂಪಿಸಿ, ಜಾರಿಗೆ ತಂದಿರುವ ಮೂರು ಪರೀಕ್ಷೆಗಳ ಈ ನೂತನ ಪದ್ಧತಿಯು ತನ್ನ ಉದ್ದೇಶವನ್ನು ಯಶಸ್ವಿಯಾಗಿ ಈಡೇರಿಸುತ್ತಿರುವುದು ಖುಷಿ ಕೊಟ್ಟಿದೆ, ಈ ಎಲ್ಲ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.