ಆದಿತ್ಯ ಠಾಕ್ರೆ ಹೇಳಿಕೆ ಬಾಲಿಶ

0
34

ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.
ಆದಿತ್ಯ ಠಾಕರೆ ನೀಡಿದ ಹೇಳಿಕೆ ಬಗ್ಗೆ ಸುವರ್ಣಸೌಧದಲ್ಲಿ‌ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಸಿಎಂ ಈ ಕಾರಣಕ್ಕೇ ಇದೊಂದು ಬಾಲಿಶ ಹೇಳಿಕೆ ಎಂದರು.
ಎಮ್‌ಇಎಸ್‌ನವರು ಇದೇ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲ ಎಂದರು.

Previous articleರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್‌ಶಿಪ್: ಯುಪಿಗೆ ಚಿನ್ನ, ಕರ್ನಾಟಕಕ್ಕೆ ಬೆಳ್ಳಿ
Next articleಭಗವದ್ಗೀತೆ ಮತ್ತು ಕಾನೂನು