Home ತಾಜಾ ಸುದ್ದಿ ಆನೆ ಹಾವಳಿಗಳ ಸಮಸ್ಯೆ ಪರಿಹಾರಕ್ಕೆ ಕ್ರಮ

ಆನೆ ಹಾವಳಿಗಳ ಸಮಸ್ಯೆ ಪರಿಹಾರಕ್ಕೆ ಕ್ರಮ

0

ಬೆಂಗಳೂರು: ಆನೆಗಳ ಹಾವಳಿಗೆ ಒಳಗಾಗುತ್ತಿರುವ ಗ್ರಾಮಸ್ಥರ ಸಮಸ್ಯೆ ಬಗೆಹರಿಸಲು ಇಂದು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಡಾ.ಮಂಜುನಾಥ್‌ರವರು ಸಭೆ ನಡೆಸಿದರು. ಗ್ರಾಮಾಂತರದ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಆನೆಗಳ ಹಾವಳಿಗೆ ಒಳಗಾಗುತ್ತಿರುವ ಗ್ರಾಮಸ್ಥರ ಸಮಸ್ಯೆ ಬಗೆಹರಿಸಲು ಇಂದು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಹಾಗೂ ಕ್ಷೇತ್ರದಲ್ಲಿ ಆನೆಗಳು ಹೆಚ್ಚಾಗಿ ಸಂಚರಿಸುವ ಪ್ರದೇಶಗಳಿಗೆ ಭೇಟಿ ನೀಡಿರುವ ಅವರು ಮಣಿಯಂಬಾಳ್, ಅರೆಕೆರೆ, ಕೊಡಹಳ್ಳಿ, ಕಾಡಶಿವನಹಳ್ಳಿ, ಕೊಳಗೊಂಡನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಆನೆಗಳು ನುಗ್ಗಿ ಬೆಳೆ ನಾಶ ಮಾಡುತ್ತಿರುವುದು ಮತ್ತು ಜನಜೀವನ ಅಸ್ತವ್ಯಸ್ತಗೊಳಿಸುತ್ತಿರುವುದು ಕಂಡು ಬಂತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತೇವೆ. ಸೋಲಾರ್ ಬೇಲಿಗಳ ಸ್ಥಿತಿಗತಿ ಪರಿಶೀಲಿಸಿ, ಅಗತ್ಯ ಬದಲಾವಣೆಗಳನ್ನು ಮಾಡಲಾಗುವುದು. ಜನರ ಸುರಕ್ಷತೆ ಹಾಗೂ ಆನೆಗಳ ಸಂರಕ್ಷಣೆ ಎರಡನ್ನೂ ಗಮನದಲ್ಲಿಟ್ಟುಕೊಂಡು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Exit mobile version