Home ತಾಜಾ ಸುದ್ದಿ ಆಪರೇಷನ್ ಸಿಂಧೂರ್: ಸೇನಾ ಕಾರ್ಯಾಚರಣೆ ಬಗ್ಗೆ ಭಾರತದಿಂದ ಮಹತ್ವದ ಸುದ್ದಿಗೋಷ್ಠಿ

ಆಪರೇಷನ್ ಸಿಂಧೂರ್: ಸೇನಾ ಕಾರ್ಯಾಚರಣೆ ಬಗ್ಗೆ ಭಾರತದಿಂದ ಮಹತ್ವದ ಸುದ್ದಿಗೋಷ್ಠಿ

0

ನವದೆಹಲಿ: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಕುರಿತಂತೆ ಮಹಿಳಾ ಅಧಿಕಾರಿಗಳಾದ ವಿಂಗ್​ ಕಮಾಂಡರ್ ವ್ಯೋಮಿಕಾ ಸಿಂಗ್​ ಹಾಗೂ ಕರ್ನಲ್ ಸೋಫಿಯಾ ಖುರೇಷಿ ಅವರು ಸುದ್ದಿಗೋಷ್ಠಿ ನಡೆಸಿದರು, ಪತ್ರಿಕಾಗೋಷ್ಠಿಯಲ್ಲಿ “ಆಪರೇಷನ್‌ ಸಿಂಧೂರ” ಕಾರ್ಯಾಚರಣೆ ಕುರಿತಂತೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ಮಾಹಿತಿ ನೀಡಿದ್ದಾರೆ.
ಏಪ್ರಿಲ್ 22ರಂದು ಪಾಕ್ ಬೆಂಬಲಿತ ಉಗ್ರರು ಕಾಶ್ಮೀರದ ಪಹಲ್ಗಾಮ್​​ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಪೈಶಾಚಿಕ ಕೃತ್ಯ ನಡೆಸಿದ್ದರು. ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಜೀವ ಕಳೆದುಕೊಂಡಿದ್ದರು. ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿತ್ತು. ಈ ಬೆನ್ನಲ್ಲೇ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಿ ಹೊಡೆದುರುಳಿಸಿದೆ. ಗಡಿಯಾಚೆಗಿನ ಭಯೋತ್ಪಾದನಾ ಯೋಜನೆಯ ಬೇರುಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದನಾ ಮೂಲಸೌಕರ್ಯ ತಾಣಗಳ ಮೇಲೆ ಕೇಂದ್ರೀಕೃತ ದಾಳಿಗಳನ್ನು ನಡೆಸಿ ಮರ್ಕಜ್ ಸುಭಾನಲ್ಲಾ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯನ್ನು ನಾಶ ಮಾಡಲಾಗಿದೆ. ಇಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡಲಾಗುತ್ತಿತ್ತು. ಯಾವುದೇ ಮಿಲಿಟರಿ ನೆಲೆಯನ್ನು ಗುರಿಯಾಗಿಸಿಕೊಂಡಿಲ್ಲ. ಯಾವುದೇ ನಾಗರಿಕರಿಗೂ ಹಾನಿಯಾಗಿಲ್ಲ ಎಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

Exit mobile version