Home ನಮ್ಮ ಜಿಲ್ಲೆ ಆರೋಪಿ ಪತ್ತೆ ಕಾರ್ಯ ಚುರುಕಾಗಿ ನಡೆದಿದೆ

ಆರೋಪಿ ಪತ್ತೆ ಕಾರ್ಯ ಚುರುಕಾಗಿ ನಡೆದಿದೆ

0

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಫೋಟಕ ಇಟ್ಟು ಹೋಗಿದ್ದ ಆರೋಪಿ ಪತ್ತೆ ಕಾರ್ಯ ಚುರುಕಾಗಿ ನಡೆದಿದೆ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಆದಷ್ಟು ಬೇಗ ಕೃತ್ಯ ಎಸಗಿದ ವ್ಯಕ್ತಿಯನ್ನು ಪತ್ತೆಹಚ್ಚಿ, ಬಂಧಿಸಲಾಗುವುದು. ಘಟನೆಯಲ್ಲಿ ಸಂಭವಿಸಿದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಜೆಪಿ ನಾಯಕರು ಸಾವು – ನೋವಿನಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಸಂಭವಿಸಿದ್ದು ಬಿಜೆಪಿ ಕಾಲದಲ್ಲಿ ಅಲ್ಲವೇ? ಆಗಲೂ ತುಷ್ಟೀಕರಣದಿಂದಾಗಿ ಸ್ಪೋಟ ನಡೆದಿತ್ತೆ? ಎಂದು ಬರೆದುಕೊಂಡಿದ್ದಾರೆ.

Exit mobile version