ಚಿತ್ರದುರ್ಗ: ಚಿತ್ರದುರ್ಗ ಅರಣ್ಯ ಇಲಾಖೆ ಆರ್‌ಎಫ್‌ಓ ವಸಂತಕುಮಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಗೀತಾ ಪಾಟೀಲ್ ಆದೇಶಿಸಿದ್ದಾರೆ.
ಹೊಳಲ್ಕೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಅ. ೧೫, ೨೦೨೫ರಂದು ಸಾಯಿ ಬಾಲಾಜಿ ಕಂಪನಿಯ ಐದು ಗಣಿ ಲಾರಿಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದರು. ಆದರೆ, ಈ ಕಾರ್ಯವನ್ನು ತನ್ನ ಅಧಿಕಾರ ವ್ಯಾಪ್ತಿ ಮೀರಿ ದುರುದ್ದೇಶದಿಂದ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿತ್ತು. ದೂರು ಪರಿಶೀಲಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.