ಆರ್‌ಟಿಪಿಎಸ್‌ ವಿದ್ಯುತ್‌ ಘಟಕದಲ್ಲಿ ದಾಖಲೆಯ ಉತ್ಪಾದನೆ

0
10

ಬೆಂಗಳೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್‌ ಕೇಂದ್ರದ ವಿದ್ಯುತ್‌ ಘಟಕ ಶಕ್ತಿನಗರದಲ್ಲಿ ದಾಖಲೆಯ ಉತ್ಪಾದನೆಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರಾಯಚೂರು ಶಾಖೋತ್ಪನ್ನ ವಿದ್ಯುತ್‌ ಕೇಂದ್ರದ (ಆರ್‌ಟಿಪಿಎಸ್‌) ಘಟಕಗಳಿಂದ ನಿಗದಿತ ಗುರಿ ಮೀರಿ ಹೆಚ್ಚಿನ ವಿದ್ಯುತ್‌ ಉತ್ಪಾದನೆ ಆಗಿದೆ. ದಿನಕ್ಕೆ 210 ಮೆಗಾವ್ಯಾಟ್‌ ಸಾಮರ್ಥ್ಯದ ಮೂರನೇ ವಿದ್ಯುತ್‌ ಘಟಕದಲ್ಲಿ ಏಪ್ರಿಲ್‌ 4ರಂದು 216 ಮೆಗಾವ್ಯಾಟ್‌ ಉತ್ಪಾದನೆ ಮಾಡಲಾಗಿದ್ದು, ಆ ಮೂಲಕ ಇತಿಹಾಸ ಬರೆಯಲಾಗಿದೆ. ತಾಂತ್ರಿಕ ಸಮಸ್ಯೆಗಳ ನಡುವೆಯೂ ಆರ್‌ಟಿಪಿಎಸ್‌ನ ಏಳು ಘಟಕಗಳು ಶೇ.85 ರಷ್ಟು ವಿದ್ಯುತ್‌ ಉತ್ಪಾದಿಸಿವೆ ಎಂದಿದ್ದಾರೆ.

Previous articleತಹಶೀಲ್ದಾರ್ ಕಚೇರಿ ಆವರಣದಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆ
Next articleಸಂಸದೆ ಪ್ರಿಯಾಂಕಾಗೆ ರಾಜಕೀಯ ಪಾಠ ಮಾಡಿದ ಡಿಸಿಎಂ