ಕೋಲ್ಕತ್ತಾ: ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಂಜಯ್ ರಾಯ್‌ಗೆ (34) ಜೀವಾವಧಿ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.
ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ಗೆ ಸೀಲ್ದಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. 2024ರ ಆಗಸ್ಟ್ 9ರಂದು ಆಸ್ಪತ್ರೆಯ ಕಾನ್ಫರೆನ್ಸ್ ಕೊಠಡಿಯಲ್ಲಿ 31 ವರ್ಷದ ತರಬೇತಿ ನಿರತ ವೈದ್ಯೆಯ ಶವ ಪತ್ತೆಯಾಗಿತ್ತು. ವೈದ್ಯರ ಮೇಲೆ ಮೊದಲು ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು.