ತರೀಕೆರೆ: ಆಸ್ತಿಗಾಗಿ ಸಹೋದರನನ್ನೇ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ.
ರಾಘವೇಂದ್ರ (40) ಮೃತ ದುರ್ದೈವಿ. ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿದ್ದು, ಬಾವನ ಜೊತೆಗೂಡಿ ಮೂವರು ಸಹೋದರಿಯರು ಕಣ್ಣಿಗೆ ಖಾರದ ಪುಡಿ ಎರಚಿ ಮಲಗಿದ್ದಲ್ಲೇ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ. ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿದ್ದು, ಬಾವನ ಜೊತೆಗೂಡಿ ಮೂವರು ಸಹೋದರಿಯರು ಕಣ್ಣಿಗೆ ಖಾರದ ಪುಡಿ ಎರಚಿ ಮಲಗಿದ್ದಲ್ಲೇ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ. ತರೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಭೇಟಿ ನೀಡಿ ಪರಿಶೀಲಿಸಿದರು