ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ

0
13

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಎರಡು ಪ್ರಮುಖ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ.
ದೆಹಲಿಯ ಬುರಾರಿ ಆಸ್ಪತ್ರೆ ಮತ್ತು ಸಂಜಯ್ ಗಾಂಧಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಇ-ಮೇಲ್‌ ಕಳಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಆಸ್ಪತ್ರೆಗಳಲ್ಲಿ ಎಲ್ಲೆಡೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಶ್ವಾನ ದಳದಿಂದ ಶೋಧ:
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಆಸ್ಪತ್ರೆಗಳಲ್ಲಿ ಶ್ವಾನ ದಳದಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳದ ಸಮೇತ ಪೊಲೀಸರು ಸ್ಥಳದಲ್ಲಿದ್ದಾರೆ.

Previous articleನೇಹಾ ಹತ್ಯೆ ಪ್ರಕರಣ: ದೋಷಾರೋಪ ಪಟ್ಟಿ ಸಲ್ಲಿಕೆಗೆ ಸಿಐಡಿ ಸಿದ್ಧತೆ
Next articleಭಾರೀ ಮಳೆ: ಮರ ಬಿದ್ದು ಪಾದಚಾರಿ ಸಾವು