ಆಸ್ಪತ್ರೆಗೆ ದಾಖಲಾದ ತಬಲಾ ಮಾಂತ್ರಿಕ

0
34

ಬೆಂಗಳೂರು: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅವರು ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಗೆ ದಾಖಲಾಗಿದ್ದಾರೆ
ಈ ಕುರಿತು ಮಾಹಿತಿ ಹಂಚಿಕೊಂಡ ಜಾಕಿರ್ ಹುಸೇನ್ ಆಪ್ತ ಸ್ನೇಹಿತ ರಾಕೇಶ್ ಚೌರಾಸಿಯಾ, “ಜಾಕಿರ್‌ ಅಸ್ವಸ್ಥರಾಗಿದ್ದಾರೆ ಮತ್ತು ಇದೀಗ ಐಸಿಯುನಲ್ಲಿ ದಾಖಲಾಗಿದ್ದಾರೆ. ನಾವೆಲ್ಲರೂ ಪರಿಸ್ಥಿತಿಯ ಬಗ್ಗೆ ಚಿಂತಿತರಾಗಿದ್ದೇವೆ” ಎಂದು ತಿಳಿಸಿದ್ದಾರೆ.
ಕಳೆದ ವಾರವೇ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

Previous articleಅಭಿವೃದ್ಧಿಯೇ ನಮ್ಮ ತಾಯಿ ತಂದೆ, ಗ್ಯಾರಂಟಿಯೇ ನಮ್ಮ ಬಂಧು ಬಳಗ
Next articleಬಸ್‌ ಪಲ್ಟಿ: 20ಕ್ಕೂ ಹೆಚ್ಚು ಜನರಿಗೆ ಗಾಯ