ಆ್ಯಸಿಡ್ ದಾಳಿ: ಸೂಕ್ತ ಕ್ರಮಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

0
12

ಇದೊಂದು ಹೀನಕೃತ್ಯ, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ

ಬೆಂಗಳೂರು: ಆ್ಯಸಿಡ್ ದಾಳಿ ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ಆಗಬೇಕು, ಇಂತಹ ಘಟನೆಗಳು ಮರುಕಳಿಸದಂತೆ ಸಾಧ್ಯವಾದಷ್ಟು ಮುನ್ನಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಘಟನೆ, ಈ ಘಟನೆ ಕುರಿತು ಈಗಾಗಲೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಇದೊಂದು ಹೀನಕೃತ್ಯ, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವ ಉದ್ದೇಶದಿಂದ ಮಾಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಪೊಲೀಸರು ಸಮಗ್ರವಾಗಿ ತನಿಖೆ ಮಾಡುತ್ತಿದ್ದಾರೆ. ಈ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ತ್ವರಿತ ಕ್ರಮಕ್ಕೆ ಮುಂದಾಗಿದೆ. ತಪ್ಪಿತಸ್ಥನಿಗೆ ಕಠಿಣ ಶಿಕ್ಷೆ ಆಗಬೇಕು; ಇಂತಹ ಘಟನೆಗಳು ಮರುಕಳಿಸದಂತೆ ಸಾಧ್ಯವಾದಷ್ಟು ಮುನ್ನಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ ಎಂದಿದ್ದಾರೆ.

Previous articleಸಂಘಟನಾ ಚತುರ ಹಾಗೂ ಕಸಾಪ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ ನಿಧನ
Next articleಸರ್ಕಾರದ ಒಪ್ಪಿಗೆ ವಿನಾಃ ಗಣತಿ ವರದಿ ವಿವರ ಬಹಿರಂಗಪಡಿಸುವಂತಿಲ್ಲ