ಇಂಡಿಯಾ ಒಕ್ಕೂಟಕ್ಕೆ ಅಧಿಕಾರ ಖಚಿತ

0
6
ಡಿಕೆಶಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಮೋದಿ ಅವರ ಅವಧಿ ಕೇವಲ ಒಂದು ವರ್ಷ ಮಾತ್ರ ಎಂಬ ಕೇಜ್ರಿವಾಲ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು ಎಂದರು.
ಸೂಚನೆ: ನನ್ನ ಜನ್ಮದಿನವಾದ ಮೇ ೧೫ರಂದು ಚುನಾವಣಾ ಪ್ರಚಾರ, ಖಾಸಗಿ ಕಾರ್ಯಕ್ರಮಗಳ ನಿಮಿತ್ತ ಉತ್ತರ ಭಾರತ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಅಂದು ನಾನು ಯಾರಿಗೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Previous articleಮರೆತುಹೋದ ಚಿನ್ನ ಪ್ರಯಾಣಿಕರಿಗೆ ವಾಪಸ್
Next articleಟಾಪ್ ಪೈವ್ ಗೆ ಲಗ್ಗೆ ಇಟ್ಟ ಆರ್‌ಸಿಬಿ