ಇಂಡಿಯಾ ಒಕ್ಕೂಟ ಟೇಕಾಫ್ ಆಗೋಲ್ಲ

0
5

ಶಿವಮೊಗ್ಗ: ಕಾಂಗ್ರೆಸ್ ನೇತೃತ್ವದ `ಇಂಡಿಯಾ’ ಒಕ್ಕೂಟ ಯಾವುದೇ ಕಾರಣಕ್ಕೂ ಟೇಕಾಫ್ ಆಗುವುದಿಲ್ಲ. ಮೋದಿ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಒಕ್ಕೂಟದ ಅನೇಕ ಸದಸ್ಯರುಗಳಲ್ಲಿಯೇ ಹೊಂದಾಣಿಕೆ ಇಲ್ಲವಾಗಿದೆ. ಕೇರಳ ರಾಜ್ಯದಲ್ಲಿ ಈಗಾಗಲೇ ಜಗಳ ಪ್ರಾರಂಭವಾಗಿದೆ. ಸಿಪಿಐ, ಕಾಂಗ್ರೆಸ್ ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ರಾಹುಲ್‌ಗಾಂಧಿ ಬಂಧನವಾಗುವ ಬಗ್ಗೆಯೇ ಮಾತುಕತೆಯಾಗುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ತನ್ನ ಖಾತೆ ತೆರೆಯಲಿದೆ. ಆಂಧ್ರಪ್ರದೇಶದಲ್ಲೂ ಕೂಡ ಕಾಂಗ್ರೆಸ್‌ಗೆ ಮಹತ್ವವಿಲ್ಲವಾಗಿದೆ. ಈ ಎಲ್ಲಾ ಕಾರಣಗಳಿಂದ ಇಂಡಿಯಾ ಒಕ್ಕೂಟ ಟೇಕಾಫ್ ಆಗಲು ಸಾಧ್ಯವೇ ಇಲ್ಲ ಎಂದರು. ಕರ್ನಾಟಕದ ಕಾಂಗ್ರೆಸ್ ಮುಖಂಡರು ಪ್ರಧಾನಿ ಮೋದಿ ಅವರ ಬಗ್ಗೆ ಕೀಳುಮಟ್ಟದ ಮಾತನಾಡುತ್ತಿರುವುದು ಸರಿಯಲ್ಲ. ಪ್ರಧಾನಿ ಹುದ್ದೆಗೆ ಗೌರವ ಕೊಡಬೇಕು. ಜನರು ಇದನ್ನು ಗಮನಿಸುತ್ತಾರೆ ಎಂದರು.

Previous articleಪಿತ್ರೋಡಾ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ
Next articleಬಡ ಮಕ್ಕಳ ಮೊಟ್ಟೆ ಮಾರಿ ಕಟ್ಟಿದ ಹೋಟೆಲ್‌ನಲ್ಲಿ ಮೋದಿ ವಾಸ್ತವ್ಯ