ಇಂದಿನಿಂದ ಫಲಪುಷ್ಪ ಪ್ರದರ್ಶನ

0
26

ಬೆಂಗಳೂರು: ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಇಂದಿನಿಂದ ಆರಂಭವಾಗಿ ಆಗಸ್ಟ್‌ 19ರ ವರೆಗೆ ನಡೆಯಲಿದೆ.


ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 216ನೇ ಫಲಪುಷ್ಪ ಪ್ರದರ್ಶನ ಇದಾಗಿದ್ದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 8 ರಿಂದ 19ರ ವರೆಗೆ ನಡೆಯಲಿದೆ. ಸ್ವಾತಂತ್ರೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 216ನೇ ಫಲಪುಷ್ಪ ಪ್ರದರ್ಶನ ಇದಾಗಿದೆ. 200 ಪ್ರಭೇದದ ಸುಮಾರು 30-32 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಆಗಸ್ಟ್‌ 8 ರಿಂದ 19ರ ವರೆಗೆ ನಡೆಯಲಿದೆ. ಲಾಲ್‌ಬಾಗ್‌ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್‌ ಟಿಕೆಟ್‌ ಯಂತ್ರಗಳ ವ್ಯವಸ್ಥೆ ಮಾಡಲಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಪಡೆದುಕೊಳ್ಳುವ ಸೌಲಭ್ಯ ಇದೆ. ವಯಸ್ಕರಿಗೆ ₹80, ರಜೆ ದಿನಗಳಲ್ಲಿ ₹100, ಮಕ್ಕಳಿಗೆ ₹30 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.

Previous articleಧಾನ್ಯಗಳ ನಷ್ಟದ ಪ್ರಮಾಣ ಕಡಿಮೆಯಾಗಿದೆ
Next articleಪ್ರಕರಣ ಸಿಬಿಐಗೆ ಕೊಡಲ್ಲ…