ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ

0
15

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಸಮೀಕ್ಷಾ ವರದಿ ಮಂಡಿಸಲಿದ್ದಾರೆ. ನಾಳೆ ತಮ್ಮ ದಾಖಲೆಯ 7ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿಒಂದೇ ವರ್ಷದಲ್ಲಿ ಎರಡು ಬಾರಿ ಬಜೆಟ್‌ ಮಂಡನೆಯಾಗಲಿದೆ. ಈ ಹಿಂದೆ ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಅನ್ನು ಮಂಡಿಸಲಾಗಿದ್ದು, ಅಂತಿಮ ಬಜೆಟ್ ಜುಲೈ 23 ರ ಮಂಗಳವಾರ ಮಂಡನೆಯಾಗಲಿದೆ.

ವಿಪಕ್ಷಗಳು ಸಜ್ಜು: ನೀಟ್‌, ನೆಟ್‌ ಪರೀಕ್ಷಾ ಅಕ್ರಮ, ಐಎಎಸ್‌ ಅಧಿಕಾರಿಗಳ ನೇಮಕಾತಿ ವಿವಾದ, ಅಗ್ನಿವೀರ್‌ ಯೋಜನೆ, ಮಣಿಪುರ ಹಿಂಸಾಚಾರ, ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿ ಮೊದಲಾದ ವಿಷಯಗಳನ್ನು ಮುಂದಿಟ್ಟುಕೊಂಡು ಇಂಡಿಯಾ ಮೈತ್ರಿಕೂಟ ಸಜ್ಜಾಗಿದೆ 19 ದಿನಗಳ ಕಾಲ ನಡೆಯಲಿರುವ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ.

Previous articleವೈಷ್ಣೋದೇವಿ ದೇವಸ್ಥಾನ ಸ್ಥಾಪಕ ದೇವಪ್ಪಜ್ಜ ಹತ್ಯೆ
Next articleಆರ್‌ಎಸ್‌ಎಸ್‌: ಸರ್ಕಾರಿ ಸಿಬ್ಬಂದಿಗಳಿಗೆ ವಿಧಿಸಿದ್ದ ನಿಷೇಧ ವಾಪಸ್