ಇಂದು ನಕ್ಸಲ್ ರವೀಂದ್ರ ಇಂದು ಶರಣಾಗತಿ

0
11

ಚಿಕ್ಕಮಗಳೂರು: ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಶನಿವಾರ ಮುಖ್ಯವಾನಿಗೆ ಬರಲಿದ್ದಾರೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಮಾಡಿದೆ. ರವೀಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದು, ಇಂದು ಬೆಳಿಗ್ಗೆ 12 ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ.

Previous articleಸಿದ್ಧಾರ್ಥನ ಸ್ಥಿತ್ಯಂತರ ಬದುಕು
Next articleಸರಣಿ ಅಪಘಾತ: ೩ ಸಾವು