ಇಂದು ಬಾಗಲಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು  ಬಾಗಲಕೋಟೆಯಲ್ಲಿ ನಡೆಯಲಿರುವ  ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಾಗಲಕೋಟೆ ಮತ್ತು ವಿಜಯಪುರ ಕ್ಷೇತ್ರಗಳ  ಬಿಜೆಪಿ ಅಭ್ಯರ್ಥಿಗಳ ಪರ ಅವರು ಮತಯಾಚಿಸಲಿದ್ದಾರೆ.

ಬೆ. 11 ಗಂಟೆಗೆ ಬಾಗಲಕೋಟೆ ನವನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ‌ ಮೋದಿಯವರು ಉಭಯ ಜಿಲ್ಲೆಯ ಜನತೆಯನ್ನುದ್ದೇಶಿಸಿ ಮಾತನಾಡಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಶಕ್ತಿ ತುಂಬಲಿದ್ದಾರೆ.  ಈ ಸಭೆಯಲ್ಲಿ ಉಭಯ ಜಿಲ್ಲೆಗಳ ಬಿಜೆಪಿ‌ ಅಭ್ಯರ್ಥಿಗಳಾದ ರಮೇಶ ಜಿಗಜಿಣಗಿ ಮತ್ತು ಪಿ. ಸಿ. ಗದ್ದಿಗೌಡರ ಸೇರಿದಂತೆ ಬಿಜೆಪಿಯ ಮತ್ತು ಜೆಡಿಎಸ್ ಪ್ರಮುಖರು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.