Home ಅಪರಾಧ ಇಡಿ ದಾಳಿ ಕಂತೆ ಕಂತೆ ಹಣ ಪತ್ತೆ

ಇಡಿ ದಾಳಿ ಕಂತೆ ಕಂತೆ ಹಣ ಪತ್ತೆ

0

ಜಾರ್ಖಂಡ್: ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಜಿ ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಮತ್ತು ಅವರ ಆಪ್ತ ವಲಯಕ್ಕೆ ಸಂಬಂಧಿಸಿದ ಸುಮಾರು ಸ್ಥಳಗಳ ಮೇಲೆ ದಾಳಿ ನಡೆದಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ಇಡಿ ದಾಳಿ ನಡೆದಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ವೈರಲ್‌ ಆಗಿದ್ದು ಅಂದಾಜಿಸಿರುವ ಪ್ರಕಾರ ಪತ್ತೆಯಾಗಿರುವ ಹಣ ಕಂತೆಯಲ್ಲಿ 25 ಕೋಟಿ ರೂ. ಗೂ ಅಧಿಕ ಮೊತ್ತಗಳು ಇರಬಹುದು ಎಂದು ಹೇಳಲಾಗಿದೆ. ಫೆಬ್ರವರಿ 2023 ರಲ್ಲಿ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಎಂಬುವವರನ್ನು ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದರೆ ಎಂದು ಬಂಧಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆ ದಾಳಿ ಮಾಡಿದೆ.

ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿಯ ವಿಡಿಯೋ :

Exit mobile version