Home ತಾಜಾ ಸುದ್ದಿ ಇತರೆ ಶಾಸಕರಿಗೆ ಎಚ್ಚರಿಕೆಯ ಘಂಟೆ

ಇತರೆ ಶಾಸಕರಿಗೆ ಎಚ್ಚರಿಕೆಯ ಘಂಟೆ

0

ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಛಾಟನೆ ಬಿಜೆಪಿಯ ಇತರೆ ಶಾಸಕರಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಹೇಳಿದ್ದಾರೆ.
ವ್ಯಕ್ತಿಗಿಂತ ಪಕ್ಷ ದೊಡ್ಡದು. ಪಕ್ಷಕ್ಕಿಂತ ದೇಶ ದೊಡ್ಡದು ಎಂಬ ಕಲ್ಪನೆಯೊಂದಿಗೆ ನಾವೆಲ್ಲ ಪಕ್ಷ ಸಂಘಟನೆ ಮಾಡಿದ್ದೇವೆ. ಹೀಗಾಗಿ ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಇದು ಉಳಿದವರಿಗೂ ಒಂದು ಪಾಠ. ಯಾರೇ ಆದರೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಮನ್ನಣೆ ನೀಡದೇ, ಪಕ್ಷದ ಚೌಕಟ್ಟಿನಲ್ಲಿ ನಡೆಯದಿದ್ದರೆ ಎಂಥದ್ದೇ ಪ್ರಭಾವಿಯಾಗಿದ್ದರೂ ಶಿಸ್ತು ಕ್ರಮ ಕಟ್ಟಿಟ್ಟ ಬುತ್ತಿ ಎಂದು `ಸಂಯುಕ್ತ ಕರ್ನಾಟಕ’ಕ್ಕೆ ತಿಳಿಸಿದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಯಾರೂ ಪಕ್ಷ ವಿರೋಧಿ ಚಟುವಟಿಕೆ ಮಾಡದಂತೆ ಅವರು ಮನವಿ ಮಾಡಿದ್ದಾರೆ.

Exit mobile version