Home ತಾಜಾ ಸುದ್ದಿ ಇದು ಯಾರು ಬರೆದ ಕಥೆಯೋ…

ಇದು ಯಾರು ಬರೆದ ಕಥೆಯೋ…

0

ಮಗು ಸಾವಿಗೆ ರಜೆ ಸಿಗದ ಆರೋಪ್‌

ವಿಜಯಪುರ: ಸೂಕ್ತ ಚಿಕಿತ್ಸೆ ಸಿಗದೆ ಮಗು ಸಾವನ್ನಪಿದ್ದು, ಮಗುವಿಗೆ ಚಿಕಿತ್ಸೆ ಕೊಡಸಲು ರಜೆ ಸಿಗದೆ ಇರುವದರಿಂದ ‌ನನ್ನ ಮಗ ಉಳಿಯಲಿಲ್ಲ ಎಂದು ಪೊಲೀಸ್‌ ಕಾನ್‌ಸ್ಟೇಬಲ್‌ ಒಬ್ಬರ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.
ನಗರದ ಗಾಂಧಿಔಕ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್‌ ಆಗಿರುವ ಎ.ಎಸ್ ಬಂಡುಗೊಳ ಅವರು ಜಿಲ್ಲಾ ಪೊಲೀಸ್ ಸಿಬ್ಬಂದಿ ಗ್ರೂಪ್‌ನಲ್ಲಿ ಹಾಕಿರುವ ಪೊಸ್ಟ್ ವೈರಲ್‌ ಆಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೊ ಮಗುವಿನ ಫೋಟೋದೊಂದಿಗೆ ಮೆಸೇಜ್ ಹಾಕಿದ್ದಾರೆ.
ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ‌ನನ್ನ ಮಗ ಉಳಿಯಲಿಲ್ಲ… ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು… ನನಗೆ ಬಹಳ ನೋವಾಗಿದೆ ಎಂದು ಮಗು ನಿಧನ ಬೆನ್ನಲ್ಲೇ ಪೊಲೀಸ್ ಅಧಿಕಾರಿ ಬಂಡುಗೊಳ ಅವರು ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿಗಳಿರುವ ಗ್ರೂಪ್​​ಗೆ ಮೆಸೇಜ್ ಹಾಕಿದ್ದಾರೆ. ಇನ್ನು ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳು ಎ.ಎಸ್ ಬಂಡುಗೋಳ ಯಾವುದೇ ರಜೆ ಕೇಳಿಲ್ಲ. ಮೌಖಿಕವಾಗಿ ಹಾಗೂ ಲಿಖಿತವಾಗಿ ಗಾಂಧಿಚೌಕ್ ಪೊಲೀಸ್ ಠಾಣಾಧಿಕಾರಿಗಳ ಬಳಿ‌‌ ರಜೆ ಕೇಳಿಲ್ಲ. ಮೊನ್ನೆ ‌ಹಾಗೂ ನಿನ್ನೆ ‌ಕರ್ತವ್ಯಕ್ಕೆ ಹಾಜರಾಗಿಲ್ಲ. ಎ.ಎಸ್.ಬಂಡುಗೋಳ‌ ಪತ್ನಿಗೆ ಇದು ಮೂರನೇ ಹೆರಿಗೆ ಎಂದು ತಿಳಿದು‌ ಬಂದಿದೆ. ಇಲಾಖಾ‌ ಸಿಬ್ಬಂದಿ ಗ್ರೂಪ್​ನಲ್ಲಿ ಪೋಸ್ಟ್ ಹಾಕಿದ್ದಾನೆ ಎಂಬ ಮಾಹಿತಿ ಇದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಲಕ್ಷ್ಮಣ ನಿಂಬರಗಿ, ಘಟನೆ ಬಗ್ಗೆ ತನಿಖೆ ಮಾಡುತ್ತೇವೆ ಎಂದಿದ್ದಾರೆ.

Exit mobile version