ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್

0
12

ಬೆಂಗಳೂರು: ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ಹಾಕಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಕುರಿತು ಮಾತನಾಡಿರುವ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕಮಗಳು ಸ್ವಾಗತಾರ್ಹ. ಹಾಗೆಯೇ ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ಹಾಕಲಾಗಿದೆ. ನನ್ನ ಅಭಿಪ್ರಾಯದ ಪ್ರಕಾರ ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ.

Previous articleಅಭೂತಪೂರ್ವ ಬಜೆಟ್
Next articleಬಡವರ ರಕ್ತ ಬಸಿದು, ಬಲಿಷ್ಠರ ಬದುಕು ಬಂಗಾರ ಮಾಡುವ ಬಜೆಟ್