Home ತಾಜಾ ಸುದ್ದಿ ಇನ್ನಾದರೂ ಗ್ಯಾರಂಟಿ ವಿರೋಧಿಗಳ ಕಣ್ಣು ತೆರೆಯಲಿ…

ಇನ್ನಾದರೂ ಗ್ಯಾರಂಟಿ ವಿರೋಧಿಗಳ ಕಣ್ಣು ತೆರೆಯಲಿ…

0

ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರಿಗೆ ಗೃಹಲಕ್ಷ್ಮಿ ಯೋಜನೆ ಒಂದು‌ ನಿದರ್ಶನ, ನಾವು ನಂಬಿಕೊಂಡ ದಾರಿಯಲಿ ಧೈರ್ಯದಿಂದ ಸಾಗಿದರೆ ಯಶಸ್ಸು ನಮ್ಮದೇ..

ಬೆಂಗಳೂರು: ಬಡತನದಲ್ಲೂ ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ಹೆಣ್ಣುಮಕ್ಕಳಿಗೆ ನೆರವಾಗುವುದೇ ನಮ್ಮ ಯೋಜನೆಯ ಉದ್ದೇಶ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ನಿವಾಸಿ ಗಂಗವ್ವ ಬಿರಾದಾರ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯ 12 ತಿಂಗಳ ₹24,000 ಹಣ ಕೂಡಿಟ್ಟು ಹೊಲಿಗೆ ಯಂತ್ರ ಖರೀದಿಸಿ, ತನ್ನ ಹೆಣ್ಣುಮಕ್ಕಳಿಗೆ ಹೊಲಿಗೆ ತರಬೇತಿ ನೀಡುವ ಮೂಲಕ ಬದುಕಿನ ಹಾದಿ ರೂಪಿಸಿಕೊಟ್ಟು ತಾಯ್ತನವನ್ನು ಮೆರೆದಿದ್ದಾರೆ. ಬಡತನದಲ್ಲೂ ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ಹೆಣ್ಣುಮಕ್ಕಳಿಗೆ ನೆರವಾಗುವುದೇ ನಮ್ಮ ಯೋಜನೆಯ ಉದ್ದೇಶವೂ ಆಗಿದೆ. ಈ ತಾಯಿಯ ಸಂಕಲ್ಪಕ್ಕೆ ನನ್ನ ಪ್ರಣಾಮ.

ಇದು ನನ್ನ ರಾಜಕೀಯ ಬದುಕಿನ ಮತ್ತೊಂದು ಸಾರ್ಥಕ ಕ್ಷಣ. ನಮ್ಮ ಗ್ಯಾರಂಟಿಗಳ ಬಗ್ಗೆ ದೇಶದ ಪ್ರಧಾನಿಯೇ ಅಪಪ್ರಚಾರಕ್ಕೆ ಇಳಿದಿರುವ, ಇಡೀ ಬಿಜೆಪಿ ಪಕ್ಷ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲೆಂದು ದಿನವಿಡೀ ಜಪಿಸುತ್ತಿರುವ ಹೊತ್ತಿನಲ್ಲಿ ಇಂಥದ್ದೊಂದು ಘಟನೆ ಬೆಳಕಿಗೆ ಬಂದಿರುವುದು ಗ್ಯಾರಂಟಿ ವಿರೋಧಿಗಳೆಲ್ಲರಿಗೂ ತಪರಾಕಿ ಬಾರಿಸಿದಂತಿದೆ.

ಬಿಜೆಪಿ – ಜೆಡಿಎಸ್ ನಾಯಕರ ಸುಳ್ಳು, ಅಪಪ್ರಚಾರಗಳ ನಡುವೆ ನಮ್ಮ ಗ್ಯಾರಂಟಿ ಯೋಜನೆ ಗೆಲ್ಲುತ್ತಿದೆ, ಜನರ ಬದುಕು ಬದಲಿಸುತ್ತಿದೆ. ಟೀಕೆಗಳು ಸಾಯುತ್ತಿವೆ, ಕೆಲಸಗಳು ಕಾಣುತ್ತಿವೆ. ಇನ್ನಾದರೂ ಗ್ಯಾರಂಟಿ ವಿರೋಧಿಗಳ ಕಣ್ಣು ತೆರೆಯಲಿ ಎಂದಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ್:‌ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ನಿವಾಸಿ ಶ್ರೀಮತಿ ಗಂಗವ್ವ ಬಿರಾದಾರ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯ ಒಟ್ಟು 12 ತಿಂಗಳ ₹ 24,000/- ಹಣ ಕೂಡಿಟ್ಟು, ₹ 8,000/- ಹಣದಲ್ಲಿ ಹೊಲಿಗೆ ಯಂತ್ರ ಖರೀದಿಸಿ, ತನ್ನ ಮೊಮ್ಮಕ್ಕಳಿಗೆ, ನೆರೆಹೊರೆಯವರಿಗೆ ಹೊಲಿಗೆಯ ತರಬೇತಿ ನೀಡಿ ಅವರ ಭವಿಷ್ಯಕ್ಕೆ ಬೆಳಕಾಗಿರುವುದು ಖುಷಿಯ ವಿಚಾರ. ಇದಲ್ಲದೇ ₹ 12,000/- ಹಣವನ್ನು ತನ್ನ ಮೊಮ್ಮಗನ ವಿದ್ಯಾಬ್ಯಾಸದ ಶುಲ್ಕ ಭರಿಸಲು ಹಾಗೂ ಉಳಿದ ₹ 4,000/- ಹಣ ಕುಟುಂಬದ ನಿರ್ವಹಣೆಗೆ ಬಳಕೆ ಮಾಡಿದ್ದಾರೆ. ಕಡುಬಡತನದ ನಡುವೆಯೂ ತನ್ನ ಮೊಮ್ಮಕ್ಕಳಿಗೆ, ನೆರೆಹೊರೆಯವರಿಗೆ ಸ್ವಾವಲಂಬಿ ಬದುಕು ರೂಪಿಸಿ ಕೊಟ್ಟಿರುವ ಈ ತಾಯಿಗೆ ಕೋಟಿ ಕೋಟಿ ಧನ್ಯವಾದಗಳು. ಗೃಹಲಕ್ಷ್ಮಿ ಯೋಜನೆಯಿಂದಾಗಿ ಇಂದು ಲಕ್ಷಾಂತರ ಬಡ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿವೆ. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರಿಗೆ ಗೃಹಲಕ್ಷ್ಮಿ ಯೋಜನೆ ಒಂದು‌ ನಿದರ್ಶನ, ನಾವು ನಂಬಿಕೊಂಡ ದಾರಿಯಲಿ ಧೈರ್ಯದಿಂದ ಸಾಗಿದರೆ ಯಶಸ್ಸು ನಮ್ಮದೇ..

Exit mobile version