ಇನ್ನೂ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ

0
19
ಆರ್‌ಎಸ್ಎಸ್

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಬಿಜೆಪಿಗೆ ವಾಪಸಾದಂತೆ ಇನ್ನಷ್ಟು ಕಾಂಗ್ರೆಸ್ ನಾಯಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿ, ಜನಾರ್ದನ ರೆಡ್ಡಿ ಮರಳಿ ಬಿಜೆಪಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇವರನ್ನು ಹೊರತುಪಡಿಸಿ ಹಲವರು ಬರುವ ನಿರೀಕ್ಚೆ ಇದೆ. ಹೆಸರು ಬಹಿರಂಗ ಪಡಿಸದಂತೆ ಮನವಿ ಮಾಡಿಕೊಂಡಿದ್ದಾರೆ‌. ಮೂಲ ಕಾಂಗ್ರೇಸಿಗರು ಬರುವುದಂತೂ ನಿಶ್ಚಿತ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೆಲಸ ಕಾರ್ಯಗಳನ್ನು‌ ಮೆಚ್ಚಿಕೊಂಡಿರುವ ಕಾಂಗ್ರೆಸ್ ನಾಯಕರು ಈಗಾಗಲೇ ಒಂದು ಹೆಜ್ಜೆ ಹೊರಗಿಟ್ಟಿದ್ದಾರೆ. ಜಗದೀಶ ಶೆಟ್ಟರ ಬಿಜೆಪಿ ಸೇರ್ಪಡೆ ವಿಚಾರ ನನಗೆ ಗೊತ್ತಿರಲಿಲ್ಲ. ಶೆಟ್ಟರ ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತೂಕತೆ ನಡೆಸಿದ್ದಾರೆ ಎಂದರು.
I N D I A ಒಕ್ಕೂಟದಲ್ಲಿನ ಬಿರುಕು ಎಲ್ಲರಿಗೂ ಗೊತ್ತಿರುವ ವಿಚಾರ. ಹಲವಾರು ರಾಜ್ಯಗಳಲ್ಲಿ ಪರಸ್ಪರ ವಿರೋಧ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ವಿರೋಧಾಭಾಸ ಇರುವ ಪಕ್ಷಗಳನ್ನ ಒಗ್ಗೂಡಿಸಲು ಸಾಧ್ಯವಿಲ್ಲ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ವಿರುದ್ಧವೇ ಹೋರಾಟ ಮಾಡಿವೆ. ಇದರಿಂದ ಕಾಂಗ್ರೆಸ್ ನಲ್ಲಿ ಈಗಾಗಲೇ ಆಂತರಿಕ ಕಚ್ಚಾಟ ಆರಂಭವಾಗಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಭವಿಷ್ಯ ನುಡಿದರು.

Previous articleಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಚಿತ್ರದುರ್ಗದಲ್ಲಷ್ಟೇ ಲಭ್ಯ: INC Bagalkot ಪೇಜ್ ನಿಂದ ಟೀಕೆ
Next articleದೇಶದ ನಿರಾಳ ಬದುಕಿಗೆ ಶಾಸನ ಸಂಹಿತೆ ಬೆಳಕು