ಇನ್ನೋವಾ ಕಾರಿಗೆ ಬೈಕ್‌ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಕೋಲಾರ: ಕಾರು ಹಾಗೂ ಬೈಕ್‌ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕುಪ್ಪನಹಳ್ಳಿ ಬಳಿ ನೂತನ ಚೆನೈ ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಈ ಘಟನೆ ನಡೆದಿದ್ದು, ಇನ್ನೊವಾ ಕಾರ್ ಹಾಗೂ ಬೈಕ್ ಡಿಕ್ಕಿಯಲ್ಲಿ ಸ್ಥಳದಲ್ಲೇ ನಾಲ್ವರ ಸಾವನ್ನಪ್ಪಿದ್ದರೆ, ನಾಲ್ವರಿಗೆ ಗಂಭೀರ ಗಾಯಗಳಾಗಿವೆ, ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಎಂಬುವವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಕಾರಿನಲ್ಲಿದ್ದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಬೈಕ್‌ ಸವಾರನ ಗುರುತು ಪತ್ತೆಯಾಗಿಲ್ಲ, ಕಾರಿನಲ್ಲಿದ್ದ ಮೃತರನ್ನು ಕೆಜಿಎಫ್ ತಾಲ್ಲೂಕು ಕಮ್ಮಸಂದ್ರ ಗ್ರಾಮದವರಾಗಿದ್ದು, ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಘಟನೆ ನಡೆದಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ.