ಇನ್ಮುಂದೆ ರಾಜ್ಯ ಸರಕಾರದಿಂದಲೇ 108 ಆ್ಯಂಬುಲೆನ್ಸ್ ಸರ್ವಿಸ್

ಬೆಂಗಳೂರು: ರಾಜ್ಯ ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಹಾಗೂ ಸಂಪೂರ್ಣ ಸೇವೆ ಮತ್ತು ನಿರ್ವಹಣೆ ಮಾಡಲು ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಪಾಳೆಗಳಲ್ಲಿ ಕೆಲಸ ಮಾಡುವ ವಿಚಾರ ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದರು. ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದ್ದು, ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ನಾನು ಶಿಫಾರಸು ಪತ್ರ ಕೊಟ್ಟಿಲ್ಲ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಮಂಡಳಿಗೆ ಹರೀಶ್ ಇಂಜಾಡಿ ಆಯ್ಕೆಯ ಆಕ್ಷೇಪ ವ್ಯಕ್ತವಾಗಿದ್ದು ಈ ಕುರಿತು ಪ್ರತಿಕ್ರಿಯಿಸಿ ನಾನು ಯಾರಿಗೂ ಶಿಫಾರಸು ಮಾಡಿಲ್ಲ. ಚುನಾವಣೆ ಮೂಲಕವೇ ಹರೀಶ್ ಇಂಜಾಡಿ ಆಯ್ಕೆಯಾಗಿರುವುದು. ಇದರ ಬಗ್ಗೆ ಮುಜರಾಯಿ ಸಚಿವರ ಜೊತೆ ಮಾತನಾಡುತ್ತೇನೆ. ನಿಯಮ ಪ್ರಕಾರ ಹರೀಶ್‌ನನ್ನು ಬದಲಾವಣೆ ಮಾಡಲು ಆಗಲ್ಲ. 3 ವರ್ಷ ಅಧಿಕಾರಾವಧಿ ಇರುತ್ತೆ ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.