Home News ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನ

ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನ

ಭದ್ರಾವತಿ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಐವರು ಯುವಕರ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿ ಪರಾರಿಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ಹಳೇನಗರ ವ್ಯಾಪ್ತಿಯಲ್ಲಿ ನಡೆದಿದೆ.
ಶ್ರೀ ಹಳದಮ್ಮ ದೇವಿ ಬೀದಿ ನಿವಾಸಿಗಳಾದ ವಿಶ್ವ ಅಲಿಯಾಸ್ ಮುದ್ದೆ ಮತ್ತು ಸಂದೀಪ ಅಲಿಯಾಸ್ ಕಡ್ಡಿ ಸಂದೀಪ ಎಂಬುವವರು ದ್ವಿಚಕ್ರ ವಾಹನದಲ್ಲಿ ಕಂಚಿಬಾಗಿಲ ವೃತ್ತದ ಮೂಲಕ ಹಾದು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಐವರು ಯುವಕರ ಗುಂಪು ಬೈಕಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ. ಕೆಳಗೆ ಬಿದ್ದ ವಿಶ್ವ ಮತ್ತು ಸಂದೀಪ ಮೇಲೆ ಕಾರಿನಿಂದ ಕೆಳಗೆ ಇಳಿದ ಐವರು ಯುವಕರು ಕೈಯಲ್ಲಿ ಮಚ್ಚು, ಲಾಂಗು ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಇಬ್ಬರೂ ಹಲ್ಲೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.
ಘಟನೆ ಸ್ಥಳಕ್ಕೆ ಸುತ್ತಮುತ್ತಲ ಜನರು ಜಮಾಯಿಸುತ್ತಿದ್ದಂತೆ ಕಾರಿನಲ್ಲಿ ಬಂದಿದ್ದ ಯುವಕರು ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ. ದ್ವಿಚಕ್ರ ವಾಹನ ಕೆಳಗೆ ಬಿದ್ದು ಸ್ವಲ್ಪ ಗಾಯಗೊಂಡಿರುವ ವಿಶ್ವ ಮತ್ತು ಸಂದೀಪ ಇಬ್ಬರನ್ನೂ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಘಟನೆ ಕುರಿತಂತೆ ಹಳೇನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version