Home ತಾಜಾ ಸುದ್ದಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

0

ನವದೆಹಲಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದೆ. ಇಬ್ರಾಹಿಂ ರೈಸಿ ಇರಾನ್‌ನ ಪೂರ್ವ ಅಜರ್‌ಬೈಜಾನ್ ಪ್ರಾಂತ್ಯದಲ್ಲಿ ಪ್ರಯಾಣಿಸುತ್ತಿದ್ದಾಗ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ನಿಯಂತ್ರಣ ಕಳೆದುಕೊಂಡು ಅಪಘಾತವಾಗಿದೆ ಎಂದು ವರದಿಯಾಗಿದೆ. ಅಜರ್‌ಬೈಜಾನ್‌ನಲ್ಲಿ ಅಪಘಾತಕ್ಕೀಡಾದ ಹೆಲಿಕಾಪ್ಟರ್‌ನಲ್ಲಿ ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಬ್ಡೊಲ್ಲಾಹಿಯಾನ್ ಕೂಡ ಅವರೊಂದಿಗೆ ಇದ್ದರು. ಇರಾನ್ ಸೇನೆ, ಅಧ್ಯಕ್ಷರ ಭದ್ರತಾ ಪಡೆ ಜೊತೆ ರಕ್ಷಣಾ ತಂಡ ಕಾರ್ಯಾಚರಣೆ ಮುಂದುವರಿಸಿದೆ
ಮಂಜು ಕವಿದ ವಾತಾವರಣದ ಕಾರಣ ಪ್ರಯಾಣ ಕಷ್ಟಕರವಾಗಿತ್ತು. ಹೀಗಾಗಿ ಪೈಲೆಟ್ ತುರ್ತು ಲ್ಯಾಂಡಿಂಗ್ ಮಾಡಲು ಮುಂದಾಗಿದ್ದಾರೆ. ಆದರೆ ಲ್ಯಾಂಡಿಂಗ್ ವೇಳೆಯೇ ಹೆಲಿಕಾಪ್ಟರ್ ಅಪಘಾತವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸದ್ಯ ಸ್ಥಳದಲ್ಲಿ ದಟ್ಟ ಮಂಜು ಕವಿದ ವಾತಾವರಣ ಕಾರಣ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದ್ದು, ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Exit mobile version