ಇವರ ಸಾಧನೆ ಕೇವಲ 67% ಮಾತ್ರ

0
7

ಬೆಂಗಳೂರು: ಸಿದ್ದರಾಮಯ್ಯ ಅವರ ಸರ್ಕಾರ ಡಿಸೆಂಬರ್ ಅಂತ್ಯಕ್ಕೆ ಕೇವಲ ₹1,61,000 ಕೋಟಿ ಗುರಿ ತಲುಪಿದೆ, ಅಂದರೆ ಇವರ ಸಾಧನೆ ಕೇವಲ 67% ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಸಿದ್ದರಾಮಯ್ಯ ಅವರ ಸರ್ಕಾರ ₹2,38,000 ಕೋಟಿ ರಾಜಸ್ವ ಸ್ವೀಕೃತಿಯ ಗುರಿ ಇಟ್ಟುಕೊಂಡಿತ್ತು. ಆದರೆ ಡಿಸೆಂಬರ್ ಅಂತ್ಯಕ್ಕೆ ಕೇವಲ ₹1,61,000 ಕೋಟಿ ಗುರಿ ತಲುಪಿದೆ, ಅಂದರೆ ಇವರ ಸಾಧನೆ ಕೇವಲ 67% ಮಾತ್ರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಸೆಂಬರ್ ಅಂತ್ಯಕ್ಕೆ 82% ಗುರಿ ಸಾಧಿಸಲಾಗಿತ್ತು. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಬಿಟ್ಟು ತಮ್ಮ ಸರ್ಕಾರದ ಗುರಿ ಏಕೆ ತಲುಪಲಿಲ್ಲ ಎಂಬುದರ ಬಗ್ಗೆ ರಾಜ್ಯದ ಜನರಿಗೆ ಉತ್ತರ ನೀಡಬೇಕೆಂದು ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.

Previous article‘ಅಶ್ವಮೇಧ’ ಬಸ್ಸುಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ: ಮಹಿಳೆಯರಿಗೆ ಉಚಿತ ಪ್ರಯಾಣ
Next articleಇಡೀ ಸರಕಾರವೇ ಪ್ರತಿಭಟನೆ ಮಾಡಲಿದೇ…