Home ತಾಜಾ ಸುದ್ದಿ ಇವಿಎಂ ಯಂತ್ರ ಪರಿಶೀಲನೆ

ಇವಿಎಂ ಯಂತ್ರ ಪರಿಶೀಲನೆ

0

ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರ ಹಾಗೂ ಪೂರ್ವ ಕ್ಷೇತ್ರದ ಮಸ್ಟರಿಂಗ್ ಕೇಂದ್ರದಲ್ಲಿ ಚುನಾವಣಾ ಸಿಬ್ಬಂದಿ ತಮ್ಮ ಇವಿಎಂ ಯಂತ್ರವನ್ನು ಸೋಮವಾರ ಪರಿಶೀಲನೆ ಮಾಡಿಕೊಂಡರು.
ಇಲ್ಲಿನ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಸೆಂಟ್ರಲ್ ಕ್ಷೇತ್ರದಲ್ಲಿ ಲ್ಯಾಮಿಂಗ್ಟನ್ ಮಸ್ಟರಿಂಗ್ ಕೇಂದ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಯಿತು. ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಬೆಳಗ್ಗೆಯಿಂದಲೇ ಆಗಮಿಸಿದ್ದ ಸಿಬ್ಬಂದಿಗಳು ತಮ್ಮ ತಮ್ಮ ಕೊಠಡಿಗಳಲ್ಲಿ ಇವಿಎಂ ಯಂತ್ರ ಪರಿಶೀಲನೆ ಮಾಡಿಕೊಂಡರು. ಪ್ರತಿಯೊಬ್ಬ ಬೂತ್ ಗೆ ಸಿಬ್ಬಂದಿ ಹಾಗೂ ಪೊಲೀಸ್ ನಿಯೋಜನೆ ಮಾಡುವ ದೃಶ್ಯಗಳು ಕಂಡು ಬಂದವು. ಚುನಾವಣೆಗೆ ತೆರಳುವ ಮುನ್ನ ಸಿಬ್ಬಂದಿಗಳು ಅಂಚೆ ಮತದಾನ ಮಾಡಿ ತೆರಳಿದರು. ಬೆಳಗ್ಗೆಯಿಂದಲೇ ಆಗಮಿಸಿದ್ದ ಸಿಬ್ಬಂದಿಗಳು ತಮ್ಮ ತಮ್ಮ ಕೊಠಡಿಗಳಲ್ಲಿ ಇವಿಎಂ ಯಂತ್ರ ಪರಿಶೀಲನೆ ಮಾಡಿಕೊಂಡರು.

Exit mobile version