ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರೆಳುವಂತೆ ನಿಗಮದ ಹಿಂದಿನ ಎಂ.ಡಿ ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿರುವ ಜಾರಿ ನಿರ್ದೇಶನಾಲಯ (ಇ.ಡಿ) ಆಧಿಕಾರಿಗಳ ವರ್ತನೆ ವಿರೋಧಿಸಿ
ಕಾಂಗ್ರೆಸ್ ಪಕ್ಷದಿಂದ ಬೆಂಗಳೂರಿನ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಧರಣಿ ನಡೆಸಲಾಯಿತು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು, ಧರಣಿ ನಡೆಸಿದರು.