ಈಗ ಕೃಷ್ಣ ಇಲ್ಲ, ದುರ್ಯೋಧನ ಗೆಲ್ತಾನೆ

0
33

ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು, ಅದು ರಾಜನ ಮೇಲೆ ಭಂಗ ಬೀರುತ್ತೆ.

ಹಾಸನ : ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಆದರೆ ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ತಾನೆ ಎಂದು ಕೋಡಿ ಶ್ರೀ ಭವಿಷ್ಯ ನುಡಿದಿದ್ದಾರೆ.
ಮಳೆ ಇನ್ನು ಮುಗಿದಿಲ್ಲ: ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು. ಮಳೆ ಇನ್ನು ಮುಗಿದಿಲ್ಲ. ಮಳೆಯಿಂದ ಜಾಸ್ತಿ ತೊಂದರೆ ಇದೆ. ಪ್ರಾಕೃತಿಕ ದೋಷ ಇದೆ. ಭೂಮಿ, ಜಲ, ಅಗ್ನಿ, ವಾಯು, ಆಕಾಶ ಸೇರಿ ಎಲ್ಲಾ ಕಡೆ ತೊಂದರೆ ಆಗುತ್ತದೆ, ಭೂಮಿ ಬಿರುಕು ಬಿಡುತ್ತೆ ಎಂದಿದ್ದೆ. ಗುಡ್ಡ ಹೋಗುತ್ತೆ ಎಂದು ಹೇಳಿದ್ದೆ. ಪ್ರವಾಹನದಲ್ಲಿ ಜಗತ್ತಿನಾದ್ಯಂತ ಮುಳುಗುತ್ತವೆ ಅಂಥ ಹೇಳಿದ್ದೆ. ಎಲ್ಲವೂ ಆಗಿವೆ, ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳ ಇದೆ ಎಂದಿದ್ದಾರೆ.

ಸರ್ಕಾರಕ್ಕೆ ಏನು ತೊಂದರೆ ಆಗಲ್ಲ : ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು, ಅದು ರಾಜನ ಮೇಲೆ ಭಂಗ ಬೀರುತ್ತೆ. ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್ ಮಾಡಿಸಿದ್ದ. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಆದರೆ ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ತಾನೆ. ಸೆಂಟ್ರಲ್, ಸ್ಟೇಟ್‌ಲ್ಲೂ ಇದೆ ಆಗೋದು ಎಂದು ಎಚ್ಚರಿಕೆ ನೀಡಿದ್ದಾರೆ.

Previous article136 ಜನಾನೂ ಸಿಎಂ ಆಗೋಕೆ ರೆಡಿ
Next articleಪಲ್ಲಕ್ಕಿ ಹೊರುವವರೇ ಬೇರೆ, ಉತ್ಸವ ಮೂರ್ತಿ ಆಗುವವರೇ ಬೇರೆ