Home ಅಪರಾಧ ಈಜಲು ಹೋಗಿದ್ದ ಮೂವರು ಬಾಲಕರು ಕೆಸರಲ್ಲಿ ಸಿಲುಕಿ ಸಾವು

ಈಜಲು ಹೋಗಿದ್ದ ಮೂವರು ಬಾಲಕರು ಕೆಸರಲ್ಲಿ ಸಿಲುಕಿ ಸಾವು

0

ಯಾದಗಿರಿ: ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ.
ನಗನೂರು ಗ್ರಾಮದ ಹೈಯಾಳಪ್ಪ(11), ಶರಣಬಸವ(10) ಹಾಗೂ ಅನಿಲ್(10) ಎನ್ನುವವರೇ ಮೃತ ಬಾಲಕರು ಎಂದು ಹೇಳಲಾಗಿದೆ.
ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಬಾಲಕರು ಕೆಸರಿನಲ್ಲಿ ಸಿಲುಕಿದ್ದರಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Exit mobile version