ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

0
24

ಹುಬ್ಬಳ್ಳಿ: ನಗರದ ರಾಣಿ ಚನ್ನಮ್ಮ (ಈದ್ಗಾ) ಮೈದಾನದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಗುರುವಾರ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಅನೇಕ ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ನಮಗೆ ದೊರೆತ ಸ್ವಾತಂತ್ರ್ಯವನ್ನು ನಾವು ಉಳಿಸಿಕೊಂಡು ಹೋಗಬೇಕಿದೆ. ಉತ್ತರ ಕರ್ನಾಟಕದ ಹಲವಾರು ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.

ಅವಳಿ ನಗರದ ಅಭಿವೃದ್ಧಿ ಸಮಗ್ರ ಅಭಿವೃದ್ಧಿಗಾಗಿ ಹು-ಧಾ ಮಹಾನಗರ ಪಾಲಿಕೆ ಅಧಿಕಾರಿ ವರ್ಗ ಸದಾ ಶ್ರಮಿಸುತ್ತಿದೆ. ಅವಳಿ ನಗರವನ್ನು ರಾಜ್ಯಕ್ಕೆ ಮಾದರಿ ನಗರವನ್ನಾಗಿ ಮಾಡುವ ಉದ್ದೇಶ ನಮ್ಮದಾಗಿದೆ ಎಂದರು.

ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್ ರಾಮಪ್ಪ ಬಡಿಗೇರ, ಪಾಲಿಕೆ ಸದಸ್ಯ ಶಿವು ಮೆಣಸಿಕಾಯಿ, ಅಧಿಕಾರಿಗಳು ಉಪಸ್ಥಿತರಿದ್ದರು.

Previous articleನಾಳೆ ವೇಳೆಗೆ ಗ್ಯುಡ್ ನ್ಯೂಸ್: ಕನ್ನಯ್ಯನಾಯ್ಡು
Next articleಬಿಟಿಡಿಎ ಹಗರಣ: ಸಿಐಡಿ ತನಿಖೆಗೆ