Home ತಾಜಾ ಸುದ್ದಿ ಈಶ್ವರಪ್ಪ-ಬಿಎಸ್‌ವೈ ಶೀಘ್ರ ಭೇಟಿ ನಿರೀಕ್ಷೆ

ಈಶ್ವರಪ್ಪ-ಬಿಎಸ್‌ವೈ ಶೀಘ್ರ ಭೇಟಿ ನಿರೀಕ್ಷೆ

0

ಬೆಂಗಳೂರು: ಮಹತ್ತರ ರಾಜಕೀಯ ಬೆಳವಣೆಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ. ಈ ಭೇಟಿ ಒಂದೆರಡು ದಿನಗಳಲ್ಲಿ ನಡೆಯುವ ನಿರೀಕ್ಷೆ ಇದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.
ಪುತ್ರ ಕೆ.ಇ.ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದೇ ಇರುವ ಕಾರಣಕ್ಕೆ ಈಶ್ವರಪ್ಪ ಅವರು ಅಸಮಾಧನಗೊಂಡಿದ್ದು, ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರರಾಗಿ ನಿಲ್ಲುವ ಸಿದ್ಧತೆಯಲ್ಲಿದ್ದಾರೆ. ಕಳೆದ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಬಂದಾಗ ಶಿವಮೊಗ್ಗದಲ್ಲಿದ್ದ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಸಮಾಧಾನಪಡಿಸಲು ಯತ್ನಿಸಿದ್ದರು. ಅದೇ ವೇಳೆ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದರು.
ಆದರೆ ದೆಹಲಿಗೆ ಹೋಗುವ ಮೊದಲೇ ಈಶ್ವರಪ್ಪ ಮಾಧ್ಯಮಗಳಿಗೆ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದರು. ನಂತರ ಬುಧವಾರ ರಾತ್ರಿ ದೆಹಲಿಗೆ ತೆರಳಿದರೂ ಅಮಿತ್ ಶಾ ಭೇಟಿಗೆ ಸಮಯಾವಕಾಶ ನೀಡಲಿಲ್ಲ. ಇದಾದ ಬಳಿಕವೂ ಈಶ್ವರಪ್ಪ ಪಕ್ಷೇತರ ಸ್ಪರ್ಧೆಯ ಹಠ ಹಿಡಿದಿದ್ದಾರೆ. ಆರ್‌ಎಸ್‌ಎಸ್ ಹಿರಿಯರ ಸಲಹೆ ಮೇರೆಗೆ ಈಶ್ವರಪ್ಪ ಅವರ ನಿವಾಸಕ್ಕೆ ಯಡಿಯೂರಪ್ಪ ಯುಗಾದಿ ದಿನ ಭೇಟಿ ನೀಡುವ ಸಾಧ್ಯತೆ ಇದೆ. ಬಳಿಕ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಈಶ್ವರಪ್ಪ ಭೇಟಿ ಮಾಡುವ ನಿರೀಕ್ಷೆ ಇದೆ.

Exit mobile version