ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ

ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯಾನಕ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ.
ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಏ.19 ರಂದು ಶಿವಮೊಗ್ಗದಿಂದ ಕಾಶ್ಮೀರ ಪ್ರವಾಸಕ್ಕೆ ಮಂಜುನಾಥ್ ಕುಟುಂಬಸ್ಥರು ತೆರಳಿದ್ದರು. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು, ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಸುರಕ್ಷಿತವಾಗಿದ್ದಾರೆ.