Home News ಉಗ್ರರ ದಾಳಿಗೆ ಕನ್ನಡಿಗರು ಗುರಿ: ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ಪ್ರಯಾಣ

ಉಗ್ರರ ದಾಳಿಗೆ ಕನ್ನಡಿಗರು ಗುರಿ: ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ಪ್ರಯಾಣ

ಬೆಂಗಳೂರು: ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

Exit mobile version